ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಲಾಕ್ ಡೌನ್ ನಿರ್ವಹಣೆ ಹಾಗೂ ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಚಿಕ್ಕಲವಾಳ, ರಾಮಪುರ, ಪಾಂಗೇರಿ ಮೊದಲಾದ ಗ್ರಾಮಗಳಿಗೆ ತೆರಳಿದ ಪ್ರಕಾಶ ಹುಕ್ಕೇರಿ ಅಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದರು.
ಈ ವೇಳೆ ಗ್ರಾಮಸ್ಥರ ಸಭೆ ನಡೆಸಿದ ಅವರು, ಮಹಾಮಾರಿ ಕೊರೋನಾ ತಡೆಗಟ್ಟಲು ಮನೆಯಲ್ಲಿಯೇ ಇರಬೇಕು. ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕೊರೋನಾ ಸೋಂಕಿನ ಬಗ್ಗೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಅನಗತ್ಯವಾಗಿ ಯಾರೂ ಹೊರಗಡೆ ಬರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಏನಾದರು ಸಮಸ್ಯೆಗಳಿದ್ದರೆ ಶಾಸಕ ಗಣೇಶ ಹುಕ್ಕೇರಿ ಅಥವಾ ನನಗೆ ತಿಳಿಸಿ ಎಂದು ಪ್ರಕಾಶ ಹುಕ್ಕೇರಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ