ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ನಡುವೆ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರ ನೆರವಿಗೆ ಕೇಂದ್ರ ಸರ್ಕಾರ ನಿಂತಿದೆ. ಆದರೆ ರಾಜ್ಯ ಸರ್ಕಾರಗಳಿಂದ ಸೂಕ್ತ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆರೋಪಿಸಿದ್ದಾರೆ.
ಪ್ರವಾಸಿ ಕಾರ್ಮಿಕರ ಸಂಕಷ್ಟ ಬಗೆಹರಿಸುವ ಕಾರ್ಯದಲ್ಲಿ ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸುತ್ತಿಲ್ಲ. ಪಶ್ಚಿಮ ಬಂಗಾಳಕ್ಕೆ ನಾವು 105 ರೈಲುಗಳನ್ನು ಬಿಡಲು ಸಿದ್ಧರಿದ್ದೇವೆ. ಆದರೆ ಮಮತಾ ಬ್ಯಾನರ್ಜಿಯವರು ಈ ಪ್ರಸ್ತಾಪವನ್ನು ತಿರಸ್ಕರಿಸಿದರು. ಮಹಾರಾಷ್ಟ್ರ, ಜಾರ್ಖಂಡ್, ಪಂಜಾಬ್, ಛತ್ತೀಸ್‍ಗಢನಂತಹ ರಾಜ್ಯಗಳು ಕೂಡ ಸರಿಯಾಗಿ ಸಮನ್ವಯ ಸಾಧಿಸುತ್ತಿಲ್ಲ ಎಂದು ಗುಡುಗಿದರು.
ಪರಿಹಾರ ಕಾರ್ಯಗಳು ರಾಜ್ಯ ಸರ್ಕಾರದ ನೆಲಗಳ ಮೇಲೆ ಮಾಡಬೇಕಾದ ಕಾರಣ ಹೆಚ್ಚು ಕೇಂದ್ರ ರಾಜ್ಯ ಸರ್ಕಾರಗಳ ಮೇಲೆ ಅವಲಂಬಿತವಾಗಿರುತ್ತದೆ ಇಲ್ಲಿ ಸಮನ್ವಯ ಮುಖ್ಯ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ