Film & EntertainmentKannada NewsKarnataka NewsLatest

*ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ ಪ್ರಕರಣ; ಯೂಟ್ಯೂಬ್ ಚಾನಲ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಟ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಚಾನಲ್ ವೊಂದರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಇತ್ತೀಚೆಗೆ ಯೂಟ್ಯೂಬ್ ವಾಹಿನಿಯೊಂದರಲ್ಲಿ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆ ಹಾಕುವಂತಹ ವಿಡಿಯೋಗಳನ್ನು ಅಪ್ ಲೋಡ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಯೂಟ್ಯೂಬ್ ಚಾನಲ್ ವಿರುದ್ಧ ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Home add -Advt

ಯೂಟ್ಯೂಬ್ ಚಾನಲ್ ವಿರುದ್ಧ ಐಪಿಸಿ ಸೆಕ್ಷನ್ 506, 504, 505ರ ಅಡಿ ಮೊಕದ್ದಮೆ ದಾಖಲಾಗಿದೆ. ಆಗಸ್ಟ್ 14ರಂದು ಯೂಟ್ಯೂಬ್ ಚಾನಲ್ ನಲ್ಲಿ ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋಗಳ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ನಟ ಪ್ರಕಾಶ್ ರಾಜ್ ದೂರು ನೀಡಿದ್ದರು.


Related Articles

Back to top button