ಪ್ರಗತಿವಾಹಿನಿ ಸುದ್ದಿ; ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸುದೀರ್ಘ ಪತ್ರ ಬರೆದಿರುವ ಪ್ರಮೋದ್ ಮಧ್ವರಾಜ್, ತಮ್ಮ ರಾಜೀನಾಮೆಗೆ ಜಿಲ್ಲಾ ಕಾಂಗ್ರೆಸ್ ನ ನಡವಳಿಕೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ಈ ಹಿಂದೆ ಹಲವು ಬಾರಿ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಪ್ರಯತ್ನಿಸಿದ್ದರು. ಆದರೆ ಜಿಲ್ಲಾ ಬಿಜೆಪಿಯಿಂದ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಕಳೆದ ಮೂರು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ನಿಂದಲೂ ದೂರ ಉಳಿದಿದ್ದ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಜಿಲ್ಲಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಲಾಗುತ್ತಿದೆ.
ಹೇಳಿಕೆಗೆ ತಕ್ಕಂತೆ ದಾಖಲೆ, ಪುರಾವೆಗಳನ್ನು ಒದಗಿಸುವುದು ಕರ್ತವ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ