ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಮತಾಂತರ ನಿಷೇಧ ಕಾನೂನು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಬೇಕು. ಈ ಬಗ್ಗೆ ಬೆಳಗವೈ ಅಧಿವೇಶನದಲ್ಲಿ ಸರ್ಕಾರ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಜಾವರಿ 1ರಿಂದ ರಾಜ್ಯದಲ್ಲಿ ಉಗ್ರ ಹೋರಾಟ ನಡೆಯಲಿದೆ ಎಂದರು.
ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಈ ಕಾಯ್ದೆ ಜಾರಿಯಾಗಬೇಕಿತ್ತು. ಕಾಂಗ್ರೆಸ್ ವೋಟ್ ಬ್ಯಾಂಕ್ ಗಾಗಿ ಜಾರಿಗೆ ತರಲು ಮುಂದಾಗಿಲ್ಲ. ಕೋಟ್ಯಂತರ ಜನರನ್ನು ಮತಾಂತರ ಮಾಡುವಂತಹ ಕೆಲಸ ನಡೆದಿದೆ. ಬ್ಲ್ಯಾಕ್ ಮ್ಯಾಜಿಕ್, ಕ್ರೌರ್ಯ ಹೀಗೆ ಬೇರೆ ಬೇರೆ ತಂತ್ರಗಾರಿಕೆ ಮೂಲಕ ಮತಾಂತರ ಮಾಡಲಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ನಾವು ಬೇರೆ ರೀತಿಯಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಗುಡುಗಿದರು.
ಇದೇ ವೇಳೆ ಕೃಷಿ ಕಾಯ್ದೆ ಹಿಂಪಡೆದ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಮುತಾಲಿಕ್, ಕೇಂದ್ರ ಸರ್ಕಾರ ರೈತರ ಮುಂದೆ ಶರಣಾಗಿದೆ. ತಾವು ತಪ್ಪು ಮಾಡಿದ್ದೇವೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.
ಕಂದಾಯ ಸಚಿವರು ಸೇರಿ ಮೂವರು ಸಚಿವರ ದಿಢೀರ್ ರಾಜೀನಾಮೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ