ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುತಾಲಿಕ್ ಅವರು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಈ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಮೋದ್ ಮುತಾಲಿಕ್ ಅವರು ಕೊರೊನಾ ಸೋಂಕಿನಿಂದ ಬೇಗನೇ ಗುಣಮುಖರಾಗಲಿ ಎಂದು ಶ್ರೀ ರಾಮ ಸೇನೆ ಕಾರ್ಯಕರ್ತರು ರಾಜ್ಯಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ