Latest

ಸತತ ಎಡರನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್

ಪ್ರಗತಿ ವಾಹಿನಿ ಸುದ್ದಿ; ಪಣಜಿ: ಬಿಜೆಪಿ ಮುಖಂಡ ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪಣಜಿಯ ಡಾ. ಶ್ಯಾಮಾಪ್ರಸಾದ್ ಮುಖರ್ಜಿ ಸ್ಟೇಡಿಯಂನಲ್ಲಿ ಸೋಮವಾರ ಸಂಜೆ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಸಕ್ತ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಹುಮತಕ್ಕಾಗಿ ಇನ್ನು 1 ಸ್ಥಾನದ ಅಗತ್ಯವಿದೆ. ಸತತ ಮೂರನೇ ಬಾರಿ ಸಂಕ್ವೆಲಿಮ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಮೋದ್ ಸಾವಂತ್ ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದಾರೆ.

Home add -Advt

ಪ್ರಮೋದ್ ಸಾವಂತ್ ಜತೆಗೆ ವಿಶ್ವಜಿತ್ ರಾಣೆ, ಮಾವಿನ್ ಗುಡಿನೊ, ರವಿ ನಾಯ್ಕ, ನಿಲೇಶ್ ಚಬ್ರಾಲ್, ಸುಭಾಷ್ ಶಿರೋಡ್ಕರ್, ರೋಹನ್ ಕೌಂತೆ, ಅಟಾನಾಸಿಯೋ ಮೋನ್ಸಾರೆಟ್ಟೆ, ಮತ್ತು ಗೋವಿಂದ ಗಾವ್ಡೆ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೈ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಗಣ್ಯರು ಉಪಸ್ಥಿತರಿದ್ದರು.

Related Articles

Back to top button