Karnataka News

*ಮತ್ತೋರ್ವ ಸ್ವಾಮಿಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪ್ರಣವ ಪಂಚಾಕ್ಷರಿ ಗುರುಪೀಠದ ಶ್ರೀಗಳ ವಿರುದ್ಧ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮತ್ತೋರ್ವ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಪ್ರಣವ ಪಂಚಾಕ್ಷರಿ ಗುರುಪೀಠದದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಇಂತದ್ದೊಂದು ಗಂಭೀರ ಆರೋಪ ಕೇಳಿಬಂದಿದೆ.

ಮಠದ ಸೇವೆಗೆಂದು ಬಂದಿದ್ದ ಮಹಿಳೆ ಕಳೆದ 6 ತಿಂಗಳಿಂದ ಪುತ್ರಿ ಜೊತೆ ಮಠದಲ್ಲಿಯೇ ವಾಸವಾಗಿದ್ದರು. ಇದೀಗ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ.

Home add -Advt

ಸಂತ್ರಸ್ತೆ ಮೂಲತಃ ಆಂಧ್ರ ಪ್ರದೇಶದವರಾಗಿದ್ದಾರೆ. ಸಂತ್ರಸ್ತೆ ಸ್ವಾಮೀಜಿ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರು. ಠಾಣೆಯ ವಿಜಿಟರ್ ಬುಕ್ ನಲ್ಲಿ ಹೆಸರು, ವಿಳಾಸ ದಾಖಲಿಸಿದ್ದರು. ಬಳಿಕ ಎಲ್ಲಿಯೂ ಕಾಣಿಸಿಕೊಳ್ಳದೇ ಮಗಳ ಜೊತೆ ತೆರಳಿದ್ದ ಮಹಿಳೆಯ ಫೋನ್ ಸ್ವಿಚ್ಡ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ದೂರು ನಿಡಲು ಹೋಗಿದ್ದ ಮಹಿಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button