Kannada NewsKarnataka NewsLatestPolitics

*ಶಿಕ್ಷಣ ಸಚಿವರಿಂದ ನನಗೆ ಜೀವ ಬೆದರಿಕೆಯಿದೆ; ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆಯಿದೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ನನಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇಂದು ಪೊಲೀಸ್ ಕಮಿಷ್ನರ್ ಭೇಟಿಯಾಗಿ ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಹರಿ ಪ್ರಸಾದ್ ಹಿಂದುಳಿದ ವರ್ಗದವರು. ಅವರಿಗೆ ಸ್ಥನಮಾನ ಕೇಳುವುದರಲ್ಲಿ ತಪ್ಪೇನಿದೆ? ಬೇರೆ ಸಮುದಾಯದವರೂ ಹೋರಾಟ ಮಾಡಿದ್ದರಲ್ಲಾ? ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆಯೇನು? ಎಂದು ಪ್ರಶ್ನಿಸಿದರು.

ನನ್ನನ್ನು ಹೆದರಿಸಿ ನನ್ನ ಹೋರಾಟವನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಆದರೆ ಈ ಬೆದರಿಕೆಗಳಿಗೆ ನಾನು ಬಗ್ಗಲ್ಲ. ಹೋರಾಟವೂ ನಿಲ್ಲಲ್ಲ ಎಂದು ಹೇಳಿದ್ದಾರೆ.

Home add -Advt

ಇಷ್ಟಕ್ಕೂ ನನ್ನ ಡಿಎನ್ ಎ ಬಗ್ಗೆ ಸಚಿವರಿಗೆ ಏಕೆ ಬೇಕು? ನಾನು ಸ್ವಾಮೀಜಿ ಅಲ್ಲ ಅಂತ ಹೇಳಲು ನಿಮಗೆ ಹಕ್ಕು ಕೊಟ್ಟವರು ಯಾರು? ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ? ಸಮುದಾಯಕ್ಕೆ ನಿಮ್ಮ ಸಾಧನೆ ಏನು? ಈಗ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬಂದಿದ್ದೀರಾ. ಮುಂದೆ ಯಾವ ಪಕ್ಷಕ್ಕೆ ಹೋಗುತ್ತೀರಾ ಅಂತಾ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಮಧು ಬಂಗಾರಪ್ಪ ಮಾತಿಗೆ ಕಡಿವಾಣ ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button