Kannada NewsKarnataka News
ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ, ಗೋಕಾಕ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರವಿವಾರದಂದು ಸಂಜೆ ನಗರದ ಬಸವೇಶ್ವರ ವೃತ್ತದಲ್ಲಿ ಕೇಂದ್ರ ಹಾಗೂ ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆ ಕೂಗಿ, ಮೇಣದ ದೀಪ ಹಿಡಿದು ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ, ಪ್ರಿಯಾಂಕಾ ಜಾರಕಿಹೊಳಿ, ಕಾಂಗ್ರೆಸ್ ಮುಖಂಡರಾದ ಜಯಶ್ರೀ ಮಾಳಗಿ, ಕಲ್ಪನಾ ಜೋಶಿ, ವಿವೇಕ ಜತ್ತಿ, ಪ್ರಕಾಶ ಡಾಂಗೆ, ಜಾಕೀರಹುಸೇನ ನದಾಫ, ರಿಯಾಜ ಚೌಗಲಾ, ಇಮ್ರಾನ್ ತಪಕೀರ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.



