Latest

ಡ್ರಗ್ಸ್ ಪ್ರಕರಣ; ಪ್ರಶಾಂತ್ ಸಂಬರಗಿ ಹೊಸ ಬಾಂಬ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ವಿರುದ್ಧ ಧ್ವನಿ ಎತ್ತಿರುವ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರು ಹಾಕಿರುವ ಒಂದು ಪೋಸ್ಟ್ ಇದೀಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಸಂಬರಗಿ, ’ಸಜನಿ’ ಎಂದಷ್ಟೇ ಬರೆದು ಪೋಸ್ಟ್ ಮಾಡಿದ್ದಾರೆ. ಸಜನಿ ಎಂಬುದು ಕನ್ನಡದ ಒಂದು ಸಿನಿಮಾ ಹೆಸರಾಗಿದ್ದು, ಈ ಚಿತ್ರದಲ್ಲಿ ಶರ್ಮಿಳಾ ಮಾಂಡ್ರೆ ಹಾಗೂ ಧ್ಯಾನ್ ಅಭಿನಯಿಸಿದ್ದರು.

ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನ ಇನ್ನೋರ್ವ ಸ್ಟಾರ್ ಹೆಸರು ಶೀಘ್ರದಲ್ಲಿ ಹೊರಬರಲಿದೆ ಎಂದು ಇತ್ತೀಚೆಗೆ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ’ಸಜನಿ’ ಎಂದು ಅವರು ಮಾಡಿರುವ ಪೋಸ್ಟ್ ಸಾಕಷ್ಟು ಕುತೂಹಲವನ್ನುಂಟು ಮಾಡಿದೆ. ಅಲ್ಲದೇ ನಟಿ ಶರ್ಮಿಳಾ ಮಾಂಡ್ರೆ ಹೆಸರನ್ನು ಸೂಚ್ಯವಾಗಿ ಹೇಳಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

Home add -Advt

Related Articles

Back to top button