Latest

ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐ ಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಡಿ.ಕೆ.ಶಿವಕುಮಾರ್ ಅವರನ್ನು ವಿರೋಧಿಸುವ ಬರದಲ್ಲಿ ಕೋಮು ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ ನಾರಾಯಣಸ್ವಾಮಿ ಎಂಬುವವರು ಸಂಬರ್ಗಿ ವಿರುದ್ಧ ದೂರು ನೀಡಿದ್ದರು. ಈ ಕುರಿತು ಸೌತ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆ ವೇಳೆ ವಿಧಾನಸಭೆಯಲ್ಲಿ ಡಿ.ಕೆ.ಶಿವಕುಮಾರ್ ಬಿಲ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಪ್ರಶಾಂತ್ ಸಂಬರ್ಗಿ, ದೊಡ್ಡ ದೊಡ್ಡ ಬಂಡೆಗಳನ್ನೇ ಒಡೆದು ಹಾಕಿದವರಿಗೆ anti conversion ಬಿಲ್ ಹರಿದು ಹಾಕುವುದು ಕಷ್ಟವೇನಲ್ಲ ಬಿಡಿ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ವಿವಾದಕ್ಕಿಡಾಗಿದ್ದು ಸಂಬರ್ಗಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ನಮ್ಮ ಹೊಟ್ಟೆ ಮೇಲೆ ಸರ್ಕಾರ ಹೊಡೆಯುತ್ತಿದೆ; ನಟ ಜೋಗಿ ಪ್ರೇಮ್ ಆಕ್ರೋಶ

Home add -Advt

Related Articles

Back to top button