ಪ್ರಗತಿವಾಹಿನಿ ಸುದ್ದಿ; ರಾಯಚೂರು: ರಾಜ್ಯ ಸಂಪುಟ ವಿಸ್ತರಣೆ ಎರಡು ಮೂರು ದಿನಗಳಲ್ಲಿ ಆಗಲಿದ್ದು, ಮೊದಲಿಗೆ ಗೆದ್ದ 11 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆ ಸೋತವರಿಗೆ ಸದ್ಯಕ್ಕೆ ಸಚಿವ ಸ್ಥಾನ ಇಲ್ಲ ಎಂದು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.
ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಹಾಗೂ ಆರ್ ಆರ್ ನಗರದ ಚುನಾವಣೆ ಬಳಿಕ ಇಬ್ಬರಿಗೂ ಸಚಿವ ಸ್ಥಾನ ನೀಡುತ್ತಾರೆ. ಎರಡು ಸಚಿವ ಸ್ಥಾನ ಹಾಗೇ ಉಳಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ ಎಂದರು.
ನಾವು 17 ಜನ ಒಟ್ಟಾಗಿಯೇ ಇದ್ದೇವೆ. ಆದರೆ ಒಂದು ಬಾರಿಯೂ ಸಭೆ ಮಾಡಿಲ್ಲ. ಸಚಿವ ಸ್ಥಾನ ಸಿಗದಿದ್ದರೆ ಬಂಡಾಯದ ಪ್ರಶ್ನೆ ಇಲ್ಲ. ಒಂದು ಪಕ್ಷ ಬಿಟ್ಟು ಬಂದವರು ಮತ್ತೆ ಬಂಡಾಯ ಏಳಲು ಸಾಧ್ಯವಿಲ್ಲ ಎಂದು ಹೇಳಿದರು.
ಗೆದ್ದ ಶಾಸಕರನ್ನ ಮಂತ್ರಿಗಳನ್ನಾಗಿ ಮಾಡುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಮುಖ್ಯಮಂತ್ರಿಗಳು ನೀಡಿದ ಭರವಸೆಯನ್ನು ಈಡೇರಿಸುತ್ತಾರೆ ಅನ್ನೋ ವಿಶ್ವಾಸವಿದೆ. ಪಕ್ಷದಲ್ಲಿ ಹೈಕಮಾಂಡ್ ಇರುವುದರಿಂದ ಯಡಿಯೂರಪ್ಪನವರು ಸ್ವತಂತ್ರವಾಗಿ ಯಾವುದೇ ನಿರ್ಣಯ ತೆಗೆದುಕೊಳ್ಳಲು ಆಗಲ್ಲ. ಇನ್ನು ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ