National

*ಪ್ರತಿಭಟನೆ ವೇಳೆ ಕೆಳಗೆ ಬಿದ್ದ ಬಿಜೆಪಿ ಸಂಸದ: ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪ*

ಪ್ರಗತಿವಾಹಿನಿ ಸುದ್ದಿ: ಸಂಸತ್ ಭವನದ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಸಂಸದ ಹೈಡ್ರಾಮಾ ನಡೆದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸಂಸದರು ಸಂಸತ್ ಭವನದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ.

ಎರಡೂ ಪಕ್ಷಗಳ ಸಂಸದರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದಿದ್ದಾರೆ. ಪ್ರತಾಪ್ ಸಾರಂಗಿ ತಲೆಗೆ ಗಾಯಗಳಾಗಿವೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಾರಂಗಿ, ರಾಹುಲ್ ಗಾಂಧಿ ತಳ್ಳಿದ್ದಕ್ಕೆ ನಾನು ಬಿದ್ದಿದ್ದೇನೆ ಎಂದು ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಇನ್ನೋರ್ವ ಸಂಸದರನ್ನು ನೂಕಿದ್ದಾರೆ. ಆ ಸಂಸದ ನನ್ನ ಮೇಲೆ ಬಿದ್ದಿದ್ದಾನೆ. ಹಾಗಾಗಿ ನಾನು ಕೆಳಗೆ ಬಿದ್ದು ಗಾಯಗೊಂಡಿದ್ದೇನೆ. ನಾನು ಬೀಳಲು ರಾಹು ಗಾಂಧಿ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಯಾಳು ಪ್ರತಾಪ್ ಸಾರಂಗಿ ಆಸ್ಪತ್ರೆಗೆ ದಾಖಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button