
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ ನಡೆಯುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಾಗಿದೆ. ಕಾರ್ಯಕರ್ತನ ಹತ್ಯೆ ಮನಸ್ಸಿಗೆ ವೇದನೆ ತಂದಿದೆ. ಎಸ್ ಡಿಪಿಐ ಸಂಘಟನೆ ಬ್ಯಾನ್ ಮಾಡಿದ್ದರೆ ಇಂತಹ ಘಟನೆಗಳು ನಡೆಯುತ್ತಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಪ್ರತಿಭಾರಿ ರಾಜ್ಯದಲ್ಲಿ ಹತ್ಯೆಯಂತಹ ಘಟನೆ ನಡೆದಾಗ ಎಸ್ ಡಿಪಿಐ ಸಂಘಟನೆ ನಿಷೇಧಕ್ಕೆ ಮನವಿ ಮಾಡಿದ್ದೆವು. ಆದಾಗ್ಯೂ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ನಾಚಿಕೆಯಾಗುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಗೃಹಸಚಿವರಾಗಿದ್ದ ಸಂದರ್ಭದಲ್ಲಿ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ನಡೆದಿತ್ತು, ಮಂಗಳೂರಿನಲ್ಲಿ ಪೊಲೀಸರ ಮೇಲೆ ದಾಳಿ ನಡೆಯಿತು. ರಾಜ್ಯದಲ್ಲಿ ಹಿಂದುಗಳ ಕೊಲೆ ನಡೆಯುತ್ತಿದೆ. ಇಷ್ಟಾದರೂ ಕಠಿಣ ಕ್ರಮಕ್ಕೆ ಮುಂದಾಗದಿರುವುದು ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಮಾತನಾಡುವುದನ್ನು ಬಿಟ್ಟು ಮೊದಲು ಕೃತಿಯಲ್ಲಿ ಕಠಿಣತೆ ತೋರಬೇಕು. ಈಗಲಾದರೂ ಎಸ್ ಡಿಪಿಐ ಸಂಘಟನೆ ನಿಷೇಧಿಸಿ, ಇಂತಹ ಕೃತ್ಯಕ್ಕೆ ಕಡಿವಾಣಹಾಕಲಿ ಎಂದು ಒತ್ತಾಯಿಸಿದರು.
ಅಂತ್ಯಸಂಸ್ಕಾರ ಮೆರವಣಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ; ಕಲ್ಲು ತೂರಾಟ, ಲಾಠಿ ಚಾರ್ಜ್, ಗಾಳಿಯಲ್ಲಿ ಗುಂಡು ; ಓರ್ವ ವ್ಯಕ್ತಿಗೆ ಗಂಭೀರ ಗಾಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ