ಪ್ರಗತಿವಾಹಿನಿ ಸುದ್ದಿ: ಯಾದಗಿರಿಯಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಠಾಣೆಯಲ್ಲಿ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಬಿಎನ್ ಎಸ್ 299, 192 ಕಾಯ್ದೆಯಡಿ ಎಫ್ಐಆರ್ ದಾಖಲಾಗಿದೆ.
ಸೆ.21ರಂದು ಯಾದಗಿರಿಯ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಹಲವೆಡೆ ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟದ ಪ್ರವೃತ್ತಿ ನಡೆಯುತ್ತಿದೆ. ಮುಸ್ಲಿಂರಿಗೆ ಇಂತಹ ಪ್ರವೃತ್ತಿ ಯಾಕೆ ಬರುತ್ತೆ? ಹಿಂದೂಗಳೂ ಕೂಡ ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆಯೇನಾಗುತ್ತೆ ಗೊತ್ತಿದೆಯೇ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ? ಎಂದು ಗುಡುಗಿದ್ದರು.
ದ್ವೇಷ ಭಾವನೆಯಲ್ಲಿ ಭಾಷಣ, ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ