HealthKarnataka NewsLatestPolitics

*ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಹೊಸ ಯೊಜನೆ ಜಾರಿಗೆ ತಂದಿದೆ. ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ಯು.ಟಿ. ಖಾದರ್​ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಆಗಿರಲಿದ್ದಾರೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ಹೋಗಿ ಮಹಿಳೆಯರ ಡೇಟಾ ತೆಗೆದುಕೊಳ್ಳಲಿದ್ದು, ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೆನೋಪಾಸ್ ಕುರಿತು ಯಾವೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ತಿಳಿಸಲಿದ್ದಾರೆ ಎಂದು ತಿಳಿಸಿದರು.

Home add -Advt

ಮಹಿಳೆಯರನ್ನು ಕಾಡುತ್ತಿರುವ ಮೆನೋಪಾಸ್ ಸಮಸ್ಯೆ ಕುರಿತು ಸೂಕ್ತ ಕ್ರಮಕ್ಕೆ ನಟಿ ರಮ್ಯಾ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಜೊತೆ ನಟಿ ರಮ್ಯ ಹಾಗೂ ಇತರೆ ಪರಿಣಿತರೊಂದಿಗೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಮಹತ್ವದ ಸಂವಾದ ನಡೆಸಲಾಗಿದ್ದು, ಎಲ್ಲರ ಸಲಹೆ ಮತ್ತು ಸೂಚನೆಗಳನ್ನು ಆಲಿಸಿದ ಬಳಿಕ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಇದೇ ವೇಳೆ ಮಹಿಳೆಯರಿಗೆ ಋತುಬಂಧ ಯಾವ ಸಮಯದಲ್ಲಿ ಬಂದಿದೆ? ಯಾವ ರೀತಿ ಬಂದಿದೆ? ಅನ್ನೋದನ್ನ ತಿಳಿದುಕೊಳ್ಳಬೇಕು. ನಾರ್ಮಲ್ ಹಾಗೂ ಸರ್ಜಿಕಲ್ ಮೆನೋಪಾಸ್ ಎಂಬ ಎರಡು ವಿಭಾಗಗಳಿವೆ. ಮೆನೋ ಪಾಸ್ ಸಮಯದಲ್ಲಿ ಹೃದಯ ಸಂಬಂಧಿ, ಮೂಳೆ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಇದೆ. ಹೀಗಾಗಿ ಸರ್ಜಿಕಲ್ ಆಪರೇಷನ್ ಆದವರು ಹೆಚ್ಚಿನ ಗಮನ ಹರಿಸಬೇಕು. ನಾರ್ಮಲ್ ಮೆನೋಪಾಸ್ ಸಮಯದಲ್ಲಿ ತೊಂದರೆಯಾಗೋರಿಗೆ ಆಹಾರದಲ್ಲೇ ಸರಿಮಾಡಬಹುದು ಎಂದು ಮಹಿಳಾ ತಜ್ಞೆ ಜೋಸ್ನಾ ತಿಳಿಸಿದರು.

ಋತುತಾರೆ ಯೋಜನೆಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ನಟಿ ರಮ್ಯಾ, ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮೆನೋಪಾಸ್ ಬೇಗ ಕಾಣಿಸಿಕೊಳ್ಳುತ್ತೆ. ಸಿಟಿಯಲ್ಲಿ ಅತಿ ಹೆಚ್ಚಿನ ಮಹಿಳೆಯರು ಮೆನೋಪಾಸ್‌ ಸಮಯದಲ್ಲಿ ಸಮಸ್ಯೆಯಿಂದ ಬಳಲುತ್ತಾರೆ. ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ? ಮತ್ತು ಟ್ರೀಟ್‌ಮೆಂಟ್‌ ಏನೆಂಬ ಬಗ್ಗೆ ಸಿಟಿ ಭಾಗದವರಿಗೂ ಹೆಚ್ಚಾಗಿ ಗೊತ್ತಿಲ್ಲ. ಗ್ರಾಮೀಣ ಭಾಗದವರಿಗಂತೂ ಇದರ ಬಗ್ಗೆ ಮಾಹಿತಿ ಅತಿ ಕಡಿಮೆ ಇದೆ. ಹೀಗಾಗಿ ಇದರ ಬಗ್ಗೆ ಗೃಹಾರೋಗ್ಯ ಪುಸ್ತಕದಲ್ಲಿ ಸೇರಿಸಿ ಅಂತ ಮನವಿ ಇಟ್ಟುಕೊಂಡು ಬಂದಿದ್ದೆವು. ಆದರೆ ಘೋಷಿಸಿರುವ ಯೋಜನೆಗೆ ಸರ್ಕಾರ ನನ್ನನ್ನೇ ಬ್ರ್ಯಾಂಡ್​​ ಅಂಬಾಸಿಡರ್​​ ಮಾಡಿರುವುದು ಖುಷಿ ಇದೆ ಎಂದು ಹೇಳಿದರು.

Related Articles

Back to top button