Kannada NewsKarnataka NewsLatest

*ಸಂಸದ ಪ್ರತಾಪ್ ಸಿಂಹ ಸಹೋದರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಹಾಸನ: ಮರಗಳ ಮಾರಣಹೋಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷಗಳ ಹಳೇಯ ಮರಗಳು ಕೂಡ ಇವೆ.

ಜಮೀನಿನಲ್ಲಿ ಶುಂಠಿ ಬೆಳೆಯಲೆಂದು ಒಂದು ವರ್ಷ ಭೂಮಿಯನ್ನು ಅಗ್ರಿಮೆಂಟ್ ಗೆ ಪಡೆದಿದ್ದೆ. ಆದರೆ ಮರ ಕಡಿದ ವಿಚಾರ ನನಗೆ ಗೊತ್ತೇ ಇಲ್ಲ ಎಂದು ವಿಕ್ರಂ ಸಿಂಹ ಸಮಜಾಯಿಷಿ ನೀಡಿದ್ದಾರೆ.

ಸದ್ಯ ವಿಕ್ರಂ ಸಿಂಹ ಅವರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button