
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಯಾರು ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಜಿಲ್ಲಾ ಮುಖಂಡರು, ಸಾಮಾಜಿಕ ಜಾಲತಾಣಗಳ ಮಂಡಲ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಪರ್ವ ಮುಂದುವರೆದಿದೆ.
ವಿಜಯಪುರ ಜಿಲ್ಲೆಯ ಜಿಲ್ಲಾ ಸಾಮಾಜಿಕ ಜಾಲತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆಗೂ ನ್ಯಾಯ ಸಿಕ್ಕಿಲ್ಲ. ಕಠಿನ ಕ್ರಮದ ಭರವಸೆ ಕೇವಲ ಭರವಸೆಯಾಗಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಉಪಾಧ್ಯಕ್ಷ ಆರ್.ಪಾಲಯ್ಯ, ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಚಳ್ಳಕೆರೆ ತಾಲೂಕು ಯುವ ಘಟಕ ಅಧ್ಯಕ್ಷ ಎಸ್.ಶಶಿಧರ್ ಹಾಗೂ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಕೊಪ್ಪಳದಲ್ಲಿ ಯುವಮೋರ್ಚಾ ಗ್ರಾಮಿಣ ಮಂಡಲ ಕೋಷ್ಟಾಧ್ಯಕ್ಷ ಅಣ್ಣಯ್ಯ ಹಿಟ್ನಾಳ್, ಬಾಗಲಕೋಟೆಯಲ್ಲಿ ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷರು, ಒಬಿಸಿ ಮೋರ್ಚಾ, ಮಹಿಳಾ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಒಟ್ಟಾರೆ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಮುಂದುವರೆದಿದೆ.
ಸತತ ಎರಡನೇ ದಿನವೂ ಚಿನ್ನದ ದರ ಕುಸಿತ