ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಪ್ರವೀಣ ನೆಟ್ಟಾರು ಪತ್ನಿಯನ್ನು ಕೆಲಸದಿಂದ ಕೈ ಬಿಟ್ಟಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅವರನ್ನು ಮರು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಆದರೆ ಇದಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ಕೆಪಿಸಿಸಿ ಟ್ವೀಟ್ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ