*ಮನೆ ಮೇಲೆ ಸಿಡಿಲು ಬಡಿದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯಮೇಲೆ ಸಿಡಿಲು ಬಡಿದು ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಸೋನ್ವರ್ಷಾ ಹಲ್ಲಾಬೋರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಮೇಲೆ ಸಿಡಿಲು ಬಡಿದು, ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ವೀರೇಂದ್ರ ವನವಾಸಿ, ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.Home add -Advt *ಇಬ್ಬರು ಯೋಧರ … Continue reading *ಮನೆ ಮೇಲೆ ಸಿಡಿಲು ಬಡಿದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವು*