Kannada NewsKarnataka NewsLatestPolitics
ಎಐಸಿಸಿ ಅಧಿವೇಶನದ ಶತಮಾನೋತ್ಸವದ ಪೂರ್ವಭಾವಿ ಸಭೆ


ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಸಂಬಂಧ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು.
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹಿರಿಯ ಸಚಿವರಾದ ಎಚ್ ಕೆ ಪಾಟೀಲ್,ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಡಾ ಬಿ ಎಲ್ ಶಂಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತಿತರರು ಭಾಗವಹಿಸಿದ್ದರು.




