ಪ್ರಗತಿವಾಹಿನಿ ಸುದ್ದಿ; ಮೈಸೂರು: ಪ್ರಿ-ವೆಡ್ಡಿಂಗ್ ಫೋಟೋಶೂಟ್ ಗೆ ತೆಪ್ಪದ ಮೇಲೆ ನಿಂತಿದ್ದ ವಧು-ವರರಿಬ್ಬರೂ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಲಕಾಡು ಬಲಿ ನಡೆದಿದೆ.
ಚಂದ್ರು ಹಾಗೂ ಶಶಿಕಲಾ ಮೃತ ವರ-ವಧು. ಇಬ್ಬರೂ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದಾರೆ. ಪ್ರಿ-ವೆಡ್ಡಿಂಗ್ ಫೋಟೋಶೂಟ್ ಗೆಂದು ನದಿಯಲ್ಲಿ ತೆಪ್ಪದ ಮೇಲೆ ನಿಂತು ಟೈಟಾನಿಕ್ ಪೋಸ್ ನೀಡಲೆಂದು ಹೋಗಿ ಈ ದುರಂತ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ವಧು-ವರರಿಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ತಲಕಾಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ