ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲ ವಿಡಿಯೋ ಹಂಚಿಕೆ ಆರೋಪದಲ್ಲಿ ಪ್ರೀತಂ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಭೀತಿ ಎದುರಾಗಿದೆ. ಇದೀಗ ಈ ಪ್ರಕರಣದಲ್ಲಿ ಪ್ರೀತಂ ಗೌಡಗೆ ಕೊಂಚ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಪ್ರೀತಂ ಗೌಡ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರೀತಂ ಗೌಡಗೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರೀತಂ ಗೌಡರನ್ನು ಬಂಧಿಸದಂತೆ ಆದೇಶ ಹೊರಡಿಸಿದೆ.
ಇದೇ ವೇಳೆ ಎಸ್ ಐಟಿ ತನಿಖೆಗೆ ಸಹಕರಿಸುವಂತೆ ಪ್ರೀತಂ ಗೌಡ ಅವರಿಗೆ ಹೈಕೋರ್ಟ್ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ