CrimeKannada NewsKarnataka NewsLatest

*ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ*: *ಪತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಪತಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮದುವೆಯಾಗಿ ಕೇವಲ 9 ತಿಂಗಳಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು 3 ತಿಂಗಳ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಭಾ (24) ಮೃತ ಮಹಿಳೆ. ಮೂರು ತಿಂಗಳ ಗರ್ಭಿಣಿಯಾಗಿದ್ದ ಪ್ರತಿಭಾ ಸಾವಿನ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಿನ ಕೆ.ಆರ್.ಪುರಂ ತಾಲೂಕಿನ ಬಿದರಹಳ್ಳಿ ಗ್ರಾಮದ ಪ್ರತಿಭಾ ಅವರನ್ನು ನಾಯನಹಳ್ಳಿ ಗ್ರಾಮದ ಬಚ್ಚನ್ನಗಾರಿ ಕೃಷ್ಣಾರೆಡ್ಡಿ ಅವರ ಪುತ್ರ ರಘು ಎಂಬುವವರಿಗೆ 2026ರ ಜನವರಿ 29ರಂದು ಚಿಂತಾಮಣಿಯ ಸುವರ್ಣ ಕಲ್ಯಾಣ ಮಂಟಪದಲ್ಲಿ ವಿವಾಹ ಮಾಡಿಕೊಡಲಾಗಿತ್ತು. ಪದವೀಧರೆಯಾಗಿದ್ದ ಪ್ರತಿಭಾ ಮೂರು ತಿಂಗಳ ಗರ್ಭಿಣಿಯಾಗಿದ್ದರು ಎಂದು ಪೋಷಕರು ತಿಳಿಸಿದ್ದಾರೆ.

ಪ್ರತಿಭಾ ಸಾವಿಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಗಂಡನ ಮನೆಯಲ್ಲಿನ ವ್ಯವಹಾರಗಳ ಬಗ್ಗೆ ತಮ್ಮ ಮಗಳಿಗೆ ತಿಳಿಸುತ್ತಿರಲಿಲ್ಲ. ಸರಿಯಾಗಿ ಊಟ ನೀಡದೆ, ದಿನಕ್ಕೆ ಒಮ್ಮೆ ಮಾತ್ರ ಅಡುಗೆ ಮಾಡಿಸುತ್ತಿದ್ದರು. ಕೊಳೆತ ಆಹಾರ ಪದಾರ್ಥಗಳು ಹಾಗೂ ತರಕಾರಿಗಳನ್ನು ಬಳಸುವಂತೆ ಒತ್ತಾಯಿಸುತ್ತಿದ್ದರು ಎಂಬುದಾಗಿ ಪ್ರತಿಭಾ ಸುಮಾರು ಒಂದು ತಿಂಗಳ ಹಿಂದೆ ಸೂಕ್ಷ್ಮವಾಗಿ ತಮ್ಮ ಬಳಿ ಹೇಳಿಕೊಂಡಿದ್ದಳು ಎಂದು ತಂದೆ ಕೃಷ್ಣಮೂರ್ತಿ ಆರೋಪಿಸಿದ್ದಾರೆ.

ಸಣ್ಣಪುಟ್ಟ ಕೌಟುಂಬಿಕ ವಿಚಾರವೆಂದು ಭಾವಿಸಿ, ಅವರೇ ಬಗೆಹರಿಸಿಕೊಳ್ಳುತ್ತಾರೆ ಎಂದು ಸುಮ್ಮನಾಗಿದ್ದೆವು. ಆದರೆ ಇದೀಗ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.

ತಾಯಿ ಕೋಮಲ ನೀಡಿದ ದೂರಿನ ಮೇರೆಗೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪತಿ ರಘು ಅವರನ್ನು ಬಂಧಿಸಿದ್ದಾರೆ.

Related Articles

Back to top button