Kannada NewsKarnataka NewsLatestPolitics

*ಸಂಪುಟ ವಿಸ್ತರಣೆಗೆ ಲೋಕ ಭವನದಲ್ಲಿ ಸಿದ್ಧತೆ ಆರಂಭ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಸಚಿವಸಂಪುಟ ವಿಸ್ತರಣೆಗೆ ಲೋಕಭವನದಲ್ಲಿ ಸಿದ್ಧತೆ ಆರಂಭವಾಗಿದೆ. ಪೆಂಡಾಲ್ ಹಾಕುವ ಜೊತೆಗೆ ಲೋಕಭವನ ಸುತ್ತಮುತ್ತ ಭದ್ರತೆ ವ್ಯವಸ್ಥೆ ಮಾಡಲಾಗುತ್ತಿದೆ.

ನವದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಬೀಡುಬಿಟ್ಟಿದ್ದು, ಖಾಲಿ ಇರುವ 20 ಸಚಿವಸ್ಥಾನ ತುಂಬಲು ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದಾರೆ. ಇನ್ನು ಕೆಲವೇ ಹೊತ್ತಿನಲ್ಲಿ ರಾಹುಲ ಗಂಧಿ ಅವರು ಸಭೆ ನಡೆಸಲಿದ್ದು, ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಲಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುವಾರ ಇಲ್ಲವೇ ಶುಕ್ರವಾರ ನೂತನ ಸಚಿವ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯಪಾಲರು ಪ್ರವಾಸದಲ್ಲಿರುವುದರಿಂದ ಗುರುವಾರ ರಾತ್ರಿ ವಾಪಸ್ಸಾಗುವ ನಿರೀಕ್ಷೆ ಇದ್ದು, ಶುಕ್ರವಾರ ಪ್ರಮಾಣ ವಚನ ಸಮಾರಂಭ ನಡೆಸುವ ಸಾಧ್ಯತೆ ಹೆಚ್ಚಾಗಿದೆ. ರಾಹುಲ ಗಾಂಧಿ ಜೊತೆಗಿನ ಸಭೆ. ಬಳಿಕ ಈ ಬಗ್ಗೆಸ್ಪಷ್ಟ ಚಿತ್ರಣ ಸಿಗಲಿದೆ.

40ಕ್ಕೂ ಹೆಚ್ಚು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಅಂತಿಮ ಪಟ್ಟಿಯಲ್ಲಿ ಯಾರ್ಯಾರು ಸ್ಥಾನ ಪಡೆಯಲಿದ್ದಾರೆ ಎನ್ನುವುದೇ ಕುತೂಹಲಕರವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button