Kannada NewsLatest

ಪ್ರಧಾನಿ ಮೋದಿ ಹುಟ್ಟು ಹಬ್ಬ: ಸೇವೆ ಮತ್ತು ಸಮರ್ಪಣೆ ಅಭಿಯಾನಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಸದಲಗಾ ಪಟ್ಟಣದ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮಂಡಲ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣಾ ಅಭಿಯಾನಕ್ಕೆ ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಚಾಲನೆ ನೀಡಿದರು.

ಬಳಿಕ ಸಸಿ ನೆಡುವ ಕಾರ್ಯಕ್ರಮ ಹಾಗೂ ಉಚಿತ ಲಸಿಕಾ ಮೇಳಕ್ಕೆ ಚಾಲನೆ ನೀಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಹಸಿರು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಚಿಕ್ಕೋಡಿ ಮತಕ್ಷೇತ್ರದಲ್ಲಿ ಸುಮಾರು 3000 ಸಸಿ ನೆಡುವ ಗುರಿಯಿಟ್ಟುಕೊಂಡಿದ್ದೇವೆ ಎಂದು ಹೇಳಿದರು.

Home add -Advt

ಈ ಸಂದರ್ಭದಲ್ಲಿ ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ. ರಾಜೇಶ ನೇರ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ ಅಪ್ಪಾಜಿಗೊಳ, ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ರಾಮಗೊಂಡ ಪಾಟೀಲ, ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಾಂಭವಿ ಅಶ್ವತಪುರ, ಚಿಕ್ಕೋಡಿ ಸದಲಗಾ ಬಿಜೆಪಿ ಮಂಡಲ ಅಧ್ಯಕ್ಷರಾದ ಸಂಜೀವ ಪಾಟೀಲ, ಚಿಕ್ಕೋಡಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಅಮೃತ ಕುಲಕರ್ಣಿ ರೈತ ಮೋರ್ಚಾ ಅಧ್ಯಕ್ಷರಾದ ರಾಜಶೇಖರ ರೆಂದಾಳೆ, ಚೇತನ ಪಾಟೀಲ, ಅತಿಕ್ರಾಂತ ಪಾಟೀಲ, ಪುರಸಭೆ ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ತಿರುಪತಿ ದೇವಸ್ಥಾನ ಟ್ರಸ್ಟ್ ಸದಸ್ಯರಾಗಿ ಮಿಲಿಂದ್ ನಾರ್ವೇಕರ್ ಆಯ್ಕೆ

Related Articles

Back to top button