ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ವೇದಿಕೆಯಲ್ಲಿ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿ ಉಪಸ್ಥಿತಿ ಕುರಿತು ಸೂಕ್ತ ತನಿಖೆ ನಡೆಸುವಂತೆ ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್ ಅವರು ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿ.ಎಸ್.ಶಿವಣ್ಣ ಎಂಬ ವ್ಯಕ್ತಿ ಕ್ರಿಮಿನಲ್ ಹಿನ್ನಲೆ ಹೊಂದಿದ್ದು, ಪದಗ್ರಹಣ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಕಾನೂನಿನ ಉಲ್ಲಂಘನೆ ಆಗಿದ್ದು, ಭದ್ರತಾ ಲೋಪವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾಜಿ ಸಚಿವ ಎಚ್. ವಿಶ್ವನಾಥ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
ಈ ಪತ್ರವನ್ನಾಧರಿಸಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಲು ರಾಜ್ಯಪಾಲರು ಸರಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರದಲ್ಲಿ ಸೂಚಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ