Belagavi NewsBelgaum NewsKannada NewsKarnataka NewsNationalPolitics

*ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ದ್ರೌಪದಿ ಮುರ್ಮು ಇಂದು ಸಂಜೆಯೇ ದೆಹಲಿಗೆ ವಾಪಸಾಗಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ದ್ರೌಪದಿ ಮುರ್ಮು ನಿಮ್ಹಾನ್ಸ್ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್, ಸೇರಿದಂತೆ ಕೇಂದ್ರ ಸಚಿವರು ಹಾಗೂ ಹಲವು ಶಾಸಕರು, ಸಂಸದರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Home add -Advt

ಬಳಿಕ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ತೆರಳಿ ಜಾಗತಿಕ ಗುಣಮಟ್ಟದ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿತವಾಗಿರುವ ನೂತನ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

Related Articles

Back to top button