------WebKitFormBoundarySjsnWsUIqwLAHLS����
Election NewsKannada NewsKarnataka NewsNational

*10 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾಜಿ ಸಂಸದ, ಮಾಜಿ ಸಚಿವ ಸಿ.ಎಚ್.ವಿಜಯ್ ಶಂಕ‌ರ್ ಅವರನ್ನು ಮೇಘಾಲಯಕ್ಕೆ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಇದರ ಜೊತೆ ರಾಷ್ಟ್ರಪತಿ ದೌಪದಿ ಮುರ್ಮು ಅವರು 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸಿಕ್ಕಿಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಪಂಜಾಬ್ ರಾಜ್ಯಪಾಲ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರ ರಾಜೀನಾಮೆಯನ್ನು ಮುರ್ಮು ಅಂಗೀಕರಿಸಿದ್ದಾರೆ.

ಅಸ್ಸಾಂ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರನ್ನಾಗಿ ಮತ್ತು ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿಯಾಗಿಯೂ ನೇಮಿಸಲಾಗಿದೆ. ಸಿಕ್ಕಿಂನ ಓಂ ಪ್ರಕಾಶ್ ಮಾಥುರ್ ಮತ್ತು ಜಾರ್ಖಂಡ್ ರಾಜ್ಯಪಾಲರಾಗಿ ಸಂತೋಷ್ ಕುಮಾರ್ ಗಂಗ್ವಾರ್, ರಾಜಸ್ಥಾನದ ರಾಜ್ಯಪಾಲರಾಗಿ ಹರಿಭಾವು ಕಿಸಾನ್ ರಾವ್ ಬಾಗ್ಲೆ, ತೆಲಂಗಾಣದ ರಾಜ್ಯಪಾಲರಾಗಿ ಜಿಷ್ಣು ದೇವ್ ವರ್ಮಾ ಅವರನ್ನು ನೇಮಿಸಲಾಗಿದೆ.

ಛತ್ತೀಸ್ ಗಢದ ರಾಜ್ಯಪಾಲರಾಗಿ ರಾಮನ್ ದೇಕಾ ಮತ್ತು ಮೇಘಾಲಯದ ರಾಜ್ಯಪಾಲರಾಗಿ ಸಿ.ಎಚ್.ವಿಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button