Latest

ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜುಲೈ 24ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಅಂತ್ಯವಾಗುತ್ತಿದ್ದು, ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಪ್ರಕಟಿಸಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24ರಂದು ಮುಕ್ತಾಯವಾಗುತ್ತಿದ್ದು, ಜುಲೈ 25ರೊಳಗೆ ನೂತನ ರಾಷ್ರಪತಿ ಪ್ರಮಾಣವಚನ ಸ್ವೀಕರಿಸಬೇಕಿದೆ. ಜೂನ್ 15ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 29 ಕೊನೆ ದಿನ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ರಂದು ಮತ ಎಣಿಕೆ ನಡೆಯುತ್ತಿದ್ದು, ಜುಲೈ 25ರಂದು ನೂತನ ರಾಷ್ಟ್ರಪತಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ರಾಜ್ಯಸಭೆ ಹಾಗೂ ಲೋಕಸಭೆ ಸದಸ್ಯರು ಮತ ಚಲಾವಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ರಾಜ್ಯಸಭಾ ಚುನಾವಣೆ; ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಬರೆದ ಪತ್ರ ರಿವೀಲ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button