Belagavi NewsBelgaum NewsKannada NewsKarnataka News

*ಭಾರಿ ಮಳೆ ಗಾಳಿಗೆ ತೆಂಗಿನ ಮರ ಬಿದ್ದು ತಾಯಿ-ಮಗನಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಲವು ಕಡೆ ವರುಣ ಅಬ್ಬರಿಸಿದ್ದಾನೆ. ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮಳೆ ಹಾಗೂ ಗಾಳಿಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ತಾಯಿ, ಮಗನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ನೀಲವ್ವ ಯಲ್ಲಯ್ಯನವರ (70) ಮತ್ತು ಉಳವಪ್ಪ ಯಲ್ಲಯ್ಯನವರ (37) ಗಾಯಗೊಂಡವರು. ಸಂಜೆ ರಭಸವಾಗಿ ಬೀಸಿದ ಗಾಳಿ-ಮಳೆಯಿಂದ ಮನೆ ಪಕ್ಕದಲ್ಲಿದ್ದ ತೆಂಗಿನ ಮರ ಬೇರು ಸಮೇತ ಉರುಳಿ ಮನೆ ಮೇಲಕ್ಕೆ ಬಿದ್ದಿದೆ. ಈ ವೇಳೆ ಮನೆಯಲ್ಲಿ ಮಲಗಿದ್ದ ನೀಲವ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಗ ಉಳವಪ್ಪಗೂ ಗಾಯಗಳಾಗಿವೆ.

Home add -Advt

ಮರ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button