ಆತ್ಮೀಯವಾಗಿ ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮಾನ್ಸ್) ಯಿಂದ ಆಯೋಜಿಸಲಾದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣಿಸಿದರು.
ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಬೆಳಗಾವಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೆ.ಎಲ್.ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಏರ್ ಮಾರ್ಷಲ್ ನಾಗೇಶ್ ಕಪೂರ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಲೆಫ್ಟಿನೆಂಟ್ ಜನರಲ್ ಜಿತೇಂದ್ರ ಕುಮಾರ್ ಗೇರಾ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾದ ಡಾ. ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್, ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ ಸೇರಿದಂತೆ ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ