
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ತಾಲೂಕಿನ ಮಸಬ ಹಂಚಿನಾಳದಲ್ಲಿ ನಡೆದಿದೆ.
ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೇಲೆ ತಡ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಬಸ್ ಗಾಜು ಪುಡಿ ಪುಡಿಯಾಗಿವೆ ಕಲ್ಲು ತೂರಾಟದ ಬಳಿಕ ಬಸ್ ಚಾಲಕ ಬಸ್ ನ್ನು ವಾಪಸ್ ಡಿಪೋಗೆ ಕರೆದೊಯ್ದಿದ್ದಾರೆ.
ಇದರಿಂದಾಗಿ ಪ್ರಯಾಣಿಕರು ರಾತ್ರಿ ವೇಳೆ ಪರದಾಡುವ ಸ್ಥಿತಿ ನಿರ್ಮಾಣವಾಯಿತು.