Latest

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ರಾಜ್ಯಕ್ಕೆ ಆಗಮಿಸಿದ್ದು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದರು.

ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು ಬೆಂಗಳೂರಿಗೆ ಆಗಮಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, ಮತಯಾಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.
ಹಸ್ತಪ್ರತಿ ಶಾಸ್ತ್ರದಲ್ಲಿ ಪ್ರಥಮ ಸ್ಥಾನ; ಡಾ.ಕುಮುದಾ ಹೆಗಡೆಗೆ ಉಪರಾಷ್ಟ್ರಪತಿಗಳಿಂದ ಚಿನ್ನದ ಪದಕ ಪ್ರದಾನ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button