ಪ್ರಗತಿವಾಹಿನಿ ಸುದ್ದಿ, ಮುಂಬೈ -ಕೊನೆಗೂ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಕೆಲವೇ ಹೊತ್ತಿನ ಮೊದಲು ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಿದ್ದರು. ಕೇಂದ್ರ ಸಂಪುಟವೂ ಅದನ್ನು ಅನುಮೋದಿಸಿ ರಾಷ್ಟ್ರಪತಿಗೆ ಶಿಫಾರಸ್ಸು ಮಾಡಿತ್ತು. ಇದೀಗ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಯಾವುದೇ ಪಕ್ಷದಿಂದಲೂ ಸರ್ಕಾರ ರಚಿಸುವ ಪ್ರಯತ್ನ ಕಂಡುಬರದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದರು. ರಾಜ್ಯಪಾಲರ ಶಿಫಾರಸು ಪತ್ರ ಕೇಂದ್ರ ಸರ್ಕಾರವನ್ನು ತಲುಪಿದ ತಕ್ಷ ಸಭೆ ಸೇರಿದ್ದ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಿತು.
ಈ ಮೂಲಕ ಬಿಜೆಪಿ, ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ನಡುವಿನ ಸುಮಾರು 20 ದಿನಗಳ ಹಗ್ಗಜಗ್ಗಾಟ ಅಂತ್ಯವಾಗಿದೆ.
ಸರ್ಕಾರ ರಚನೆಗೆ ಬೆಂಬಲ ಪತ್ರದೊಂದಿಗೆ ಹಕ್ಕುಮಂಡನೆ ಮಾಡಲು ಎನ್ಸಿಪಿಗೆ ಇವತ್ತು ರಾತ್ರಿಯವರೆಗೂ ನೀಡಲಾದ ಗಡುವು ಇನ್ನೂ ಅಂತ್ಯವಾಗುವ ಮುನ್ನವೇ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲು ಹೇಗೆ ಸಾಧ್ಯ ಎಂದು ಶಿವಸೇನೆ ರಾಜ್ಯಪಾಲರ ಶಿಫಾರಸ್ಸು ಪ್ರಶ್ನಿಸಿ ಸುಪ್ರಿಂ ಕೊರ್ಟ್ ಮೆಟ್ಟಿಲೇರಿದೆ. ಆದರೆ ಅಷ್ಟರೊಳಗೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ