ಪ್ರೆಸ್ ಕ್ಲಬ್ ಸೀಲ್ ಡೌನ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಂಗಳೂರು ಪ್ರೆಸ್ ಕ್ಲಬ್ ಸೀಲ್ ಡೌನ್ ಮಾಡಲಾಗಿದೆ.

ಕೊರೋನಾ ಸೋಂಕಿತ ವರದಿಗಾರರೊಬ್ಬರು ಪ್ರಸ್ ಕ್ಲಬ್ ಗೆ ಬಂದು ಹೋದ ಹಿನ್ನೆಲೆಯಲ್ಲಿ ಪ್ರೆಸ್ ಕ್ಲಬ್ ಸೀಲ್ ಡೌನ್ ಮಾಡಲು ಆರೋಗ್ಯ ಇಲಾಖೆ ಆದೇಶಿಸಿದೆ.

Home add -Advt

ರಾಷ್ಟ್ರೀಯ ವಾಹಿನಿ ವರದಿಗಾರರೊಬ್ಬರಿಗೆ ಸೋಂಕು ತಗುಲಿದ್ದು, ಅವರು ಪತ್ರಿಕಾಗೋಷ್ಠಿಯೊಂದರಲ್ಲಿ ಭಾಗವಹಿಸಿ ನಂತರ ಪ್ರೆಸ್ ಕ್ಲಬ್ ಗೂ ತೆರಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಲ್ಲಿದ್ದರು.

ಇದೀಗ ಅವರ ಕುಟುಂಬವನ್ನು ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ತಪಾಸಣೆ ಮತ್ತು ಕ್ವಾರಂಟೈನ್ ಗೆ ಕ್ರಮ ಕೈಗೊಳ್ಳಲಾಗಿದೆ.

Related Articles

Back to top button