Latest

ಬೆಲೆ ಏರಿಕೆಗೆ ಆಕ್ರೋಶ; ಕಾಂಗ್ರೆಸ್ ನಿಂದ ಸೈಕಲ್ ಜಾಥಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಆರಂಭಿಸಿದ್ದು, ಅಧಿವೇಶನಕ್ಕೆ ಸೈಕಲ್ ಮೂಲಕ ಆಗಮಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ವರೆಗೂ ಸೈಕಲ್ ಜಾಥಾ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ ಜನ ಸಾಮಾನ್ಯರು ಜೀವನ ನಡೆಸುವುದು ಹೇಗೆ? ಸಿಲಿಂಡರ್ ಬೆಲೆ ಹೆಚ್ಚುತ್ತಿದೆ. ಪೆಟ್ರೋಲ್ ದರ ನೂರು ರೂ ಗಡಿ ದಾಟಿದೆ. ತರಕಾರಿ ಬೆಲೆ ಕೂಡ ಏರುತ್ತಿದೆ. ಹೀಗಾದರೆ ಜನರು ಒಪ್ಪೊತ್ತಿನ ಊಟ ಮಾಡುವುದಾದರು ಹೇಗೆ? ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಿದರೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಆಗಿತ್ತು ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಈ ಮಟ್ಟಕ್ಕೆ ಯಾವ ವಸ್ತುಗಳ ಬೆಲೆಯೂ ಏರಿರಲಿಲ್ಲ. ಈಗ ಒಂದು ವಸ್ತುಗಳ ಬೆಲೆ ದುಪ್ಪಟ್ಟಾಗಿದೆ. ಅಧಿವೇಶದಲ್ಲಿ ಮಾತ್ರವಲ್ಲ, ಅಧಿವೇಶನದ ನಂತರವೂ ನಮ್ಮ ಹೋರಾಟ ಮುಂದುವರೆಯುತ್ತೆ ಎಂದು ಹೇಳಿದರು.
ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button