ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೇ 21 ಹಾಗೂ 22ರಂದು ನಡೆಯಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
15,000 ಶಿಕ್ಷಕರ ಹುದ್ದೆಗೆ ಮೇ21ರಿಂದ ನಡೆಯಲಿರುವ 2 ದಿನದ ಪರೀಕ್ಷೆ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರದ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗುತ್ತಿದ್ದು, ನಿಷೇಧಾಜ್ಞೆ ವ್ಯಾಪ್ತಿಯನ್ನು ವಿಸ್ತರಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲ. ಅಭ್ಯರ್ಥಿಗಳು ಕೈಗೆ ವಾಚ್ ಕಟ್ಟಿ ಪರೀಕ್ಷೆಗೆ ಬರುವಂತಿಲ್ಲ. ಬ್ಲುಟೂತ್, ಸ್ಮಾರ್ಟ್ ಬ್ಯಾಂಡ್ ಹಾಗೂ ಇನ್ನಿತರ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್ ಗಳಿಗೆ ಅವಕಾಶವಿಲ್ಲ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರ ಅಳವಡಿಸಲಾಗುವುದು ಎಂದು ತಿಳಿಸಿದರು.
ಶಿರದವಾಡದಿಂದ ಬೇಡಕಿಹಾಳ ರಸ್ತೆ ಕಾಮಗಾರಿಗೆ 1.50 ಕೋಟಿ ರೂಪಾಯಿ ಮಂಜೂರು: ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ