Kannada NewsKarnataka NewsNationalPolitics

*ಮೇ 10 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ*

ಪ್ರಗತಿವಾಹಿನಿ ಸುದ್ದಿ; ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲು ಇದೇ ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ.

ಪ್ರಧಾನಿಯವರು ಕನಕಪುರ ರಸ್ತೆಯಲ್ಲಿರುವ ‘ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಆಶ್ರಮದ 45ನೇ ವರ್ಷಾಚರಣೆ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನದ ಅಂಗವಾಗಿ ಆಯೋಜಿಸಲಾದ ವಿಶೇಷ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.

ಈ ವೇಳೆ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಲಾದ ನೂತನ ಧ್ಯಾನ ಮಂದಿರವನ್ನು ಪ್ರಧಾನಿಯವರು ಲೋಕಾರ್ಪಣೆಗೊಳಿಸಲಿದ್ದಾರೆ.

ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈಗಾಗಲೇ ಎಸ್‌ಪಿಜಿ ತಂಡವು ನಗರಕ್ಕೆ ಆಗಮಿಸಿ ಆಶ್ರಮದ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ಪರಿಶೀಲನೆ ನಡೆಸುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button