LatestPoliticsWorld

*ಚೀನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ*

ಪ್ರಗತಿವಾಹಿನಿ ಸುದ್ದಿ: ಭಾರತ ಮತ್ತು ಚೀನಾ ನಡುವಿನ ಸಂಬಂಧ ಸರಿ ಇಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡಿದ್ದಾರೆ. 

ಶಾಂಫೈ ಸಹಕಾರ ಒಕ್ಕೂಟ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ  ಅವರು ಚೀನಾದ ಟಿಯಾಂಜಿನ್‌ಗೆ ಆಗಮಿಸಿದ್ದಾರೆ. ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಗೆ ಚೀನಾ ಭರ್ಜರಿ ಸ್ವಾಗತ ನೀಡಲಾಗಿದೆ.

ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಸುಧಾರಣೆಯ ಆಗಬಹುದು ಎನ್ನಲಾಗಿದೆ.

ಎಸ್‌ಸಿಒ ಶೃಂಗಸಭೆ 2025 ರಲ್ಲಿ ಭಾಗವಹಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಈ ಬಾರಿಯ ಶೃಂಗಸಭೆ ಎಸ್‌ಸಿಒ ಇತಿಹಾಸದಲ್ಲೇ ಅತ್ಯಂತ ಬೃಹತ್ ಸಭೆ ಎಂಬ ಖ್ಯಾತಿ ಪಡೆದುಕೊಂಡಿದೆ. 

Home add -Advt

ಪ್ರಧಾನಿ ಮೋದಿ ಅವರು ಬರೋಬ್ಬರಿ ಏಳು ವರ್ಷಗಳ ಬಳಿಕ ಚೀನಾದ ನೆಲದಲ್ಲಿ ಕಾಲಿಟ್ಟಿದ್ದಾರೆ. ಅವರು ಕೊನೆಯ ಬಾರಿ 2018 ರಲ್ಲಿ ಚೀನಾ ಪ್ರವಾಸ ಕೈಗೊಂಡಿದ್ದರು. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿರುವ ಶಾಂಫೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕ ನೀತಿಯಿಂದಾಗಿ ಅಮೆರಿಕಾ-ಭಾರತದ ನಡುವೆ ಸಂಬಂಧ ಹಳಸಿದ್ದು ಈ ನಡುವೆ ಭಾರತ-ಚೀನಾ ಭೇಟಿ ಮಹತ್ವ ಪಡೆದುಕೊಂಡಿದೆ.

Related Articles

Back to top button