ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೇರಳದ ವಯನಾಡ್ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಆಗಮಿಸಿ ನಂತರ ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಭೂಕುಸಿತಕ್ಕೀಡಾದ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ, ಬಳಿಕ ಈ ದುರಂತದಲ್ಲಿ ಬದುಕುಳಿದವರೊಂದಿಗೆ ಸಂವಾದಿಸಲಿದ್ದಾರೆ. ಮೋದಿ ಮಧ್ಯಾಹ್ನ 12.15ರ ಸುಮಾರಿಗೆ ಭೂಕುಸಿತ ಪೀಡಿತ ಪ್ರದೇಶವನ್ನು ತಲುಪುತ್ತಾರೆ. ಅಲ್ಲಿ ಸಂತ್ರಸ್ತರನ್ನು ಸ್ಥಳಾಂತರಿಸುವ ಪ್ರಯತ್ನಗಳ ಕುರಿತು ರಕ್ಷಣಾ ಪಡೆಗಳಿಂದ ಮಾಹಿತಿ ನೀಡಲಾಗುತ್ತದೆ. ಇದೇ ವೇಳೆ ಪುನರ್ವಸತಿ ಕಾರ್ಯಗಳ ಮೇಲ್ವಿಚಾರಣೆ ಮಾಡಲಾಗುತ್ತದೆ. ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಸಂತ್ರಸ್ತರು ಮತ್ತು ದುರಂತದಲ್ಲಿ ಬದುಕುಳಿದವರನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.
ಭೂಕುಸಿತದಲ್ಲಿ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಭಾರತೀಯ ಸೇನೆ, ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ತುರ್ತು ಪ್ರತಿಕ್ರಿಯೆ ವಿಭಾಗಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ