
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಫಾರಿ ನಡೆಸಿ ಗಮನ ಸೆಳೆದರು.
ಇಂದು ಬೆಳಿಗ್ಗೆ ಮೈಸೂರಿನಿಂದ ಮೇಲುಕಾಮನಹಳ್ಳಿ ಹೆಲಿಪ್ಯಾಡ್ ಗೆ ಆಗಮಿಸಿದ ಪ್ರಧಾನಿ ಮೋದಿ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಂಡಿಪುರ ಕ್ಯಾಂಪ್ ಗೆ ಆಗಮಿಸಿದರು. ಅಲ್ಲಿನ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿದರು. ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದರು.
ಬಳಿಕ ಬಂಡಿಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ಮೋದಿಯವರು ಸಫಾರಿ ನಡೆಸಿದರು. ಸುಮಾರು 2 ತಾಸುಗಳ ಕಾಲ ಸುಮಾರು 20 ಕೀಮೀ ವರೆಗೆ ಸಫಾರಿಯಲ್ಲಿ ಸಂಚರಿಸಿದರು.