GIT add 2024-1
Beereshwara 33

ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲೋಕಸಭಾ ಚುನಾವಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದಾರೆ.

ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.‌
ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಅಣ್ಣಾ ಸಾಹೇಬ ಜೊಲ್ಲೆ ಒಡೆತನದ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು.

Emergency Service

ಪ್ರಧಾನಿ ನರೇಂದ್ರ ಮೋದಿಯವರಿಗೆ ಉತ್ತರ ಕರ್ನಾಟಕ ಶೈಲಿಯ ಜೋಳದ ರೊಟ್ಟಿ ಊಟ ತಯಾರಿಸಲಾಗಿದೆ. ಮೊದಲಬಾರಿಗೆ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿಗೆ ವೈವಿದ್ಯಮಯ ಖಾದ್ಯ ತಯಾರಿಸಲಾಗಿದೆ.

ನಾಳೆ ಬೆಳಗ್ಗೆ ಮೋದಿಯವರು ಯುಡಿಯೂರಪ್ಪ ಮಾರ್ಗದಲ್ಲಿ ಇರುವ ಮಾಲಿನಿ ಸಿಟಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

Laxmi Tai add
Bottom Add3
Bottom Ad 2