Latest

2ನೇ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದು

ಪ್ರಗತಿವಾಹಿನಿ; ಬೆಂಗಳೂರು –

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. ಸತತ ಎರಡನೇ ಬಾರಿ ಪ್ರಧಾನಿ ರಾಜ್ಯ ಪ್ರವಾಸ ರದ್ದಾಗಿದೆ.

ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೋದಿ ಪ್ರವಾಸ ಕುರಿತು ಮಾಹಿತಿ ಬಹಿರಂಗ ಪಡಿಸಿದ್ದರು.‌
ಮೋದಿ ನಫ್ತಾಲಿ ಬೆನೆಟೆಡ್ ಜೊತೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದರು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟೆಡ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಮೋದಿ ಪ್ರವಾಸ ರದ್ದಾಗಿದೆ.

ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ( PM Narendra Modi ) ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದರು.

Home add -Advt

ಏಪ್ರಿಲ್ 5ರಂದು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಲೋಕಾರ್ಪಣೆ, ಮೇಲ್ದರ್ಜೆಗೇರಿಸಿದ 150 ಐಟಿಐ ಉದ್ಘಾಟನೆ ಕಾರ್ಯಕ್ರಮ, ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸೇರಿ ಮೂರು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿತ್ತು. ಆದರೆ ಪಿಎಂ ಅವರ ನಿಗದಿತ ಕರ್ನಾಟಕ ಪ್ರವಾಸ ರದ್ದಾಗಿದೆ‌ .

ಪ್ರಧಾನಿ ರಾಜ್ಯ ಭೇಟಿ ದಿನ ನಿಗದಿ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ

https://pragati.taskdun.com/karnataka-news/prime-minister-visits-state-chief-minister-basavaraja-bommai-information/

Related Articles

Back to top button