ಇನ್ನೂ ಎರಡು ದಿನ ಗುಡುಗು ಸಹಿತ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ.’

Home add -Advt

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಹಾಗೂ ಮಿಂಜು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button