Kannada NewsKarnataka News

ಗ್ರಾಮಗಳ ಜೀವಾಳವಾಗಿರುವ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ -ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ -ರಸ್ತೆಗಳು ಹಳ್ಳಿಗಳ ಜೀವಾಳ. ರಸ್ತೆ ಸರಿಯಾಗಿದ್ದರೆ ಎಲ್ಲ ವ್ಯವಹಾರಗಳೂ ಸುಗಮವಾಗಿ ನಡೆಯುತ್ತವೆ. ಅಪಘಾತಗಳ ಸಂಖ್ಯೆಯೂ ತಗ್ಗುತ್ತವೆ. ಹಾಗಾಗಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಹೇಳಿದ್ದಾರೆ.

174 ಲಕ್ಷ ರೂ. ವೆಚ್ಚದಲ್ಲಿ ಚಿಂಚಣಿ- ಶಿರಗಾಂವ್ ರಸ್ತೆ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದಕ್ಕೆ ತಕ್ಕಂತೆ ರಸ್ತೆ ಅಭಿವೃದ್ಧಿಯಾಗಬೇಕು. ಗ್ರಾಮೀಣ ಜನರು ದಿನನಿತ್ಯ ತಮ್ಮ ವ್ಯವಹಾರಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸಬೇಕಾಗುತ್ತದೆ. ರಸ್ತೆ ಸರಿಯಾಗಿಲ್ಲದಿದ್ದರೆ ಸಂಚಾರ ದುಸ್ತರವಾಗುತ್ತದೆ. ಹಾಗಾಗಿ ಕ್ಷೇತ್ರಾದ್ಯಂತ ಸುಸಜ್ಜಿತ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.

ರಸ್ತೆ ನಿರ್ಮಾಣ ಸಂದರ್ಭದಲ್ಲಿ ಗುಣಮಟ್ಟಕ್ಕೆ ಸೂಚನೆ ನೀಡಲಾಗಿದೆ. ಗ್ರಾಮಸ್ಥರೂ ಈ ಬಗ್ಗೆ ಗಮನ ಹರಿಸಬೇಕಾಗುತ್ತದೆ. ರಸ್ತೆ ನಿರ್ಮಾಣ ಸಂದರ್ಭದಲ್ಲಿ ಜನರಿಗೆ ಹೆಚ್ಚಿನ ತೊಂದರೆಯಾಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ. ಜನರು ಕೂಡ ಕಾಮಗಾರಿಗ ಸಹಕಾರ ನೀಡಬೇಕು ಎಂದು ಅವರು ಕರೆ ನೀಡಿದರು.

ಈ ಬಾರಿ ಹೆಚ್ಚಿ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ರಸ್ತೆಗಳು ಹಾಳಾಗಿವೆ. ಹಾಗಾಗಿ ಹಂತ ಹಂತವಾಗಿ ಎಲ್ಲ ರಸ್ತೆಗಳನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.

ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button