
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಇರುವ ಹಿಂಡಲಗಾ ಜೈಲಿನಲ್ಲಿ ಕೈದಿಗಳು ಹೊಡೆದಾಡಿಕೊಂಡಿದ್ದು, ಓರ್ವ ಕೈದಿಗೆ ಗಂಭೀರ ಗಾಯಗಳಾಗಿವೆ.
ಜೈಲಿನಲ್ಲಿ ಶಿಕ್ಷೆ ಅನುಭವಿಸಿತ್ತಿರುವ ಮುತ್ಯಾನಟ್ಟಿ ಮೂಲದ ಖೈದಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಎರಡು ತಿಂಗಳ ಹಿಂದಷ್ಟೇ ಹವಾಲ್ದಾರ ಮೇಲೆ ಹಲ್ಲೆ ಮಾಡಿ ಬಂದಿರುವ ಮಂಗಳೂರಿನ ಖೈದಿ ಫಯಾನ್ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆ ಅನುಭವಿಸುತ್ತಿರುವ ಮುತ್ಯಾನಟ್ಟಿ ಗ್ರಾಮದ ಸುರೇಶ್ ಇಬ್ಬರ ನಡುವೆ ಜಗಳವಾಗಿದೆ.
ಜಗಳ ವಿಕೋಪಕ್ಕೆ ತಿರುಗಿ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಓರ್ವ ಕೈದಿ ಗಾಯಗೊಂಡಿದ್ದು, ಗಾಯಾಳು ಕೈದಿಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಗಿದ್ದು, ತನಿಖೆ ನಡೆದಿದೆ.




