Kannada NewsKarnataka NewsNational
*ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ: 30 ಕ್ಕೂ ಹೆಚ್ಚು ಮಂದಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದ ಪರಿಣಾಮ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮದ ಸಮೀಪ ನಡೆದಿದೆ.
ನಾಗಶ್ರೀ ಟ್ರಾವೆಲ್ಸ್ ಗೆ ಸೇರಿದ ಬಸ್ ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿತ್ತು. ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಹೆಗ್ಗನಹಳ್ಳಿ ಗ್ರಾಮದ ಬಳಿ ಬಸ್ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ.
ಗಾಯಗೊಂಡ ಪ್ರಯಾಣಿಕರನ್ನು ಸಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ದಟ್ಟಣೆ ಉಂಟಾಗಿತ್ತು. ತಕ್ಷಣವೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.




