ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಖಾಸಗಿ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರದಲ್ಲಿ ನಡೆದಿದೆ.
ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರ ತೆಗೆದಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬಸ್ ದುರಂತದ ಬಗ್ಗೆ ಮಾಹಿತಿ ನೀಡಿರುವ ಸಾರಿಗೆ ಸಚಿವ ಶ್ರೀರಾಮುಲು, ಬಸ್ ನಲ್ಲಿದ್ದ 7 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬಸ್ ನಲ್ಲಿ 35 ಜನರು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಬಸ್ ದುರಂತವಾಗಿರುವುದರಿಂದ ಪರಿಹಾರದ ಬಗ್ಗೆ ಸಿಎಂ ಜತೆ ಚರ್ಚಿಸಿ ಮಾತನಾಡುವುದಾಗಿ ತಿಳಿಸಿದರು.
ರಾಜ್ಯ ಸಭಾ ಚುನಾವಣೆ; 2ನೇ ಅಭ್ಯರ್ಥಿ ನಾಮಪತ್ರ ವಾಪಸ್ ಇಲ್ಲ ಎಂದ ಕಾಂಗ್ರೆಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ